ಉನ್ನತ ಕನಸಿಗೆ ನೆರವಾಗಲಿದೆ ಜ್ಞಾನ ವಿಕಾಸ

06 SIRAGUPPA 01
Published on

ಸಿರಗುಪ್ಪ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಂಡು ಭವಿಷ್ಯದ ಶಿಕ್ಷಣದ ಮೂಲಕ ಉನ್ನತ ಸ್ಥಾನಕ್ಕೆ ಹೋಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ಟ್ಯೂಷನ್ ನೀಡಲಾಗುತ್ತಿದೆ ಎಂದು ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ಹೇಳಿದರು.

ಪಟ್ಟಣದ 5ನೇ ವಾರ್ಡಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜ್ಞಾನವಿಕಾಸ ಕಾರ್ಯಕ್ರಮದಡಿ ಕಳೆದ 3 ತಿಂಗಳಿಂದ ನಡೆದ ವಿಶೇಷ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ನಗರಸಭೆ ಸದಸ್ಯ ಮೀರ್ ಹುಸೇನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ಟ್ಯೂಷನ್ ಮೂಲಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸಿರುವುದು ಸಂತಸ ತಂದಿದೆ ಎಂದರು. ಶಾಲೆಯ ಮುಖ್ಯಗುರು ಅಯ್ಯಪ್ಪ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪ್ರಿಯಾ, ಮೇಲ್ವಿಚಾರಕಿ ಚಂದ್ರಕಲಾ, ಸೇವಾಪ್ರತಿನಿಧಿಗಳಾದ ಶಾಹಿದ್, ಶಾಕಿರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net