ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಿ

mannalli
Published on

ಬೀದರ್: ಪ್ರಸ್ತುತ ಸಾಕಷ್ಟು ಶೈಕ್ಷಣಿಕ ಸೌಕರ್ಯ ಲಭ್ಯವಿದೆ. ವಿದ್ಯಾರ್ಥಿಗಳು ಅವುಗಳನ್ನು ಉಪಯೋಗಿಸಿಕೊಂಡು ಉನ್ನತ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಹೊಸದಾಗಿ ಪ್ರಾರಂಭವಾಗಿರುವ ಬಿಸಿಎ ಕೋಸ್೯ ಚಾಲನೆ ನೀಡಿ ಮಾತನಾಡಿ, ವಿದ್ಯಾಥರ್ಿಗಳು ಮೊಬೈಲ್ ಮತ್ತು ಅಂತರ್ಜಾಲದಲ್ಲಿಯೇ ಸಮಯ ಹಾಳುಮಾಡದೇ ಜಾಗತಿಕ ಪೈಪೋಟಿ ಎದುರಿಸಿ ಭವಿಷ್ಯ ರೂಪಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದರು.
ಭಾರತ ವೇಗದಿಂದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನದಲ್ಲಿ ನಿಪುಣರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನ ಗಳಿಸಲು ಗಮನ ನೀಡಬೇಕು. ಹೊಸದಾಗಿ ಆರಂಭಿಸಿರುವ ಬಿಸಿಎ ಕೋಸ್೯ನ್ನು ಗ್ರಾಮೀಣ ಭಾಗದ ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನಲ್ಲಿ ಸೌಲಭ್ಯಗಳ ಕೊರತೆ ಇದ್ದರೆ ನನ್ನನ್ನು ಸಂಪರ್ಕಿಸಿದರೆ ಸ್ಪಂದಿಸುವೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಧನರಾಜ ಬಿರಾದಾರ ಮಾತನಾಡಿ, ಹೊಸದಾಗಿ ಬಿಸಿಎ ಕೋಸ್೯ ಕಾಲೇಜಿನಲ್ಲಿ ಈ ವರ್ಷದಿಂದ ಆರಂಭಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಕಾಶಿಬಾಯಿ ಬಕಪ್ಪ, ಪಿಡಿಒ ಕನಕರಾಯ, ನೌಬಾದ್ನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ ಉಪ್ಪೆ, ಘೋಡಂಪಳ್ಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ತುಮಕುಂಟೆ ದೇವಿದಾಸ, ಡಾ.ನವರಂಗ ಮಾಣಿಕರಾವ್, ಡಾ.ಹಾಲಪ್ಪಗೋಳ ಪೃಥ್ವಿರಾಜ, ಸವಿತಾ ಪಾಟೀಲ್ ಇತರರಿದ್ದರು. ಪ್ರೊ.ದಶವಂತ ಮಾರುತಿ ಪ್ರಾಸ್ತಾವಿಕ ಮಾತನಾಡಿದರು. ಡಾ.ಧನರಾಜ ತುಡಮೆ ಸ್ವಾಗತಿಸಿದರು. ಮಧು ಜಿ. ನಿರೂಪಣೆ ಮಾಡಿದರು. ಡಾ.ಸಂದೀಪ ತಿವಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net