ಉನ್ನತ ಶಿಕ್ಷಣ ಪಡೆದು ಹುಟ್ಟೂರಿಗೆ ಕೊಡುಗೆ ನೀಡಿ

Published on

ಬೇಲೂರು: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆದು ದೇಶ ಹಾಗೂ ಹುಟ್ಟಿದ ಊರಿಗೆ ಕೊಡುಗೆ ನೀಡುವಂತೆ ಶಾಸಕ ಕೆ.ಎಸ್.ಲಿಂಗೇಶ್ ಸಲಹೆ ನೀಡಿದರು.

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ತಾಲೂಕು ಪಂಚಾಯಿತಿ ಕಚೇರಿ ಆವರಣ ಮಂಗಳವಾರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿ ಮಾತನಾಡಿದ ಅವರು, ಕರ್ನಾಟಕದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕೆಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಏಕರೂಪ ಶಿಕ್ಷಣ ಜಾರಿಗೆ ತಂದಿದ್ದು, ಅದರಲ್ಲಿ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ 5 ಸಾವಿರ ರೂ.ಮೌಲ್ಯದ ಶಾಲಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಇದನ್ನು ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ನಾಯಕ್, ಕಾರ್ಮಿಕ ಇಲಾಖೆ ನೀರಿಕ್ಷಕ ಯೋಗೇಶ್, ಶಾಸಕರ ಆಪ್ತ ಕಾರ್ಯದರ್ಶಿ ತಾರಾನಾಥ್ ನಾಯಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷಮೂರ್ತಿ, ತಾಪಂ ಸಿಬ್ಬಂದಿ ನಂದಕುಮಾರ್, ಬೋಜೇಗೌಡ ಹಾಗೂ ಕಾರ್ಮಿಕರು, ಮಕ್ಕಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net