

ಚಿತ್ರದುರ್ಗ: ಕೆನರಾಬ್ಯಾಂಕ್ ವಿದ್ಯಾಜ್ಯೋತಿ ಯೋಜನೆಯಡಿ ಜಿಲ್ಲೆ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ 72 ವಿದ್ಯಾರ್ಥಿನಿಯರಿಗೆ 2,77,500 ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಕೆನರಾಬ್ಯಾಂಕ್ ಆಯೋಜಿಸಿದ್ದ ಕಾರ‌್ಯಕ್ರಮದಲ್ಲಿ ಮಣಿಪಾಲ ಕೆನರಾಬ್ಯಾಂಕ್ ವೃತ್ತ ಕಚೇರಿ ಜನರಲ್ ಮ್ಯಾನೇಜರ್ ಎಂ.ಜಿ.ಪಂಡಿತ್ ಹಾಗೂ ದಾವಣಗೆರೆ ಪ್ರಾದೇಶಿಕ ಕಚೇರಿ ಎಜಿಎಂ ವೈವಿಎನ್ ಶಿವಪ್ರಸಾದ್ ವಿದ್ಯಾರ್ಥಿ ವೇತನ ವಿತರಿಸಿದರು.
ಸಾಮಾಜಿಕ,ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ 5,6 ಮತ್ತು 7ನೇ ತರಗತಿ ವಿದ್ಯಾರ್ಥಿನಿಯರಿಗೆ ತ ಲಾ 2500 ರೂ.ಮತ್ತು 8,9 ಮತ್ತು 10ನೇ ತರಗತಿ ವಿದ್ಯಾರ್ಥಿನಿಯರಿಗೆ ತಲಾ 5000 ರೂ.ಚೆಕ್‌ಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಪಂಡಿತ್,ಬ್ಯಾಂಕ್ ಕಳೆದ 10 ವರ್ಷಗಳ ಹಿಂದೆ ಜಾರಿಗೊಳಿಸಿರುವ ವಿದ್ಯಾಜ್ಯೋತಿ ಯೋಜನೆಯಡಿ ಸರ್ಕಾ ರಿ ಹಾಗೂ ಅನುದಾನಿತ ಶಾಲೆಗಳ 5ರಿಂದ 10ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ವಿದ್ಯಾ ರ್ಥಿ ವೇತನ ಕೊಡಲಾಗುತ್ತಿದೆ.
ದೇಶದ ಎಲ್ಲ ಕೆನರಾ ಬ್ಯಾಂಕ್ ಶಾಖೆಗಳಲ್ಲೂ ಈ ಯೋಜನೆ ಜಾರಿಯಲ್ಲಿದ್ದು,ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯವಿದೆ ಎಂದರು. ಲೀಡ್‌ಬ್ಯಾಂಕ್ ವ್ಯವಸ್ಥಾಪಕ ಎಸ್.ತಿಪ್ಪೇಶ್ ಮಾತನಾಡಿ,ಜಿಲ್ಲೆಯಲ್ಲಿರುವ 30 ಕೆನರಾಬ್ಯಾಂ ಕ್ ಶಾಖೆಗಳ ಪೈಕಿ 13 ಶಾಖೆಗಳಿಂದ ವಿದ್ಯಾರ್ಥಿ ವೇತನ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಶಾಖೆಗಳಿಂದಲೂ ವಿದ್ಯಾರ್ಥಿ ವೇತನ ವಿತರಿಸಲಾಗುವುದೆಂದರು.