ಉನ್ನತ ಸ್ಥಾನ ಪಡೆಯಿರಿ

24 YERRISWAMY 03
Published on

ಬಳ್ಳಾರಿ : ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಪುರಸ್ಕಾರಕ್ಕೆ ಪಾತ್ರರಾದರೆ ಸಾಲದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉನ್ನತ ಸ್ಥಾನ ಪಡೆಯಬೇಕು ಎಂದು ಪಾಲಿಕೆ ಸದಸ್ಯ ಕೆ.ಎಸ್.ಅಶೋಕ ಹೇಳಿದರು.
ಇಲ್ಲಿನ ಕೇಂದ್ರ ಗ್ರಂಥಾಲಯದಲ್ಲಿ ಶ್ರೀಏಕಲವ್ಯ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ. 90% ಕ್ಕೂ ಅಧಿಕ ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿದ್ಯೆ ಜತೆಗೆ ಶ್ರದ್ಧೆ , ಭಕ್ತಿ ಹಾಗೂ ವಿನಯತೆ ಇರಬೇಕು. ವಿದ್ಯೆ ಒಂದೇ ಅಲ್ಲ ಚಾತುರ್ಯತೆಯಿಂದ ತಮ್ಮ ಮುಂದಿನ ಜೀವನದಲ್ಲಿ ಬರುವ ಹಲವು ಸವಾಲುಗಳು ಎದುರಿಸಬೇಕು ಎಂದರು.
ಬ್ರಹ್ಮಾನಂದ ಸ್ವಾಮೀಜಿ, ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ ಮೋಹನ ಕಿಶೋರ್, ಏಕಲವ್ಯ ಟ್ರಸ್ಟ್ ಕಾರ್ಯದರ್ಶಿ ಟಿ. ಚಂದ್ರಶೇಖರ್ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net