ಉಪ ಚುನಾವಣೆ ಗೆಲುವು ಪಕ್ಷಕ್ಕೆ ಬಲ

oplus_2
oplus_2
Published on

ಚಿತ್ರದುರ್ಗ: ಪಕ್ಷ ಮತ್ತಷ್ಟು ಬಲಗೊಂಡಿದೆ ಎಂಬುದಕ್ಕೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳು ಗೆದ್ದಿರುವುದೆ ಸಾಕ್ಷಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ಉಪ ಚುನಾವಣೆ ಗೆಲುವಿಗೆ ಸಿಎಂ, ಡಿಸಿಎಂರಂತೆ ಪ್ರತಿ ಕಾರ್ಯಕರ್ತರ ಕೊಡುಗೆಯೂ ಇದೆ. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು. ಅದಕ್ಕಾಗಿ ಈಗಿನಿಂದಲೇ ಸಿದ್ಧರಾಗಿ ಎಂದು ಸಲಹೆ ನೀಡಿದರು.

ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋತಿರಬಹುದು. ಮುಂದೆ ಸರಿಪಡಿಸಿಕೊಳ್ಳೋಣ. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಸಚಿವ ಸತೀಶ್ ಜಾರಕಿಹೊಳಿ ಅವರ ಪಾತ್ರ ಬಹಳಷ್ಟಿದೆ. ಮುಂದೆ ರಾಜ್ಯದ ಚುಕ್ಕಾಣಿ ಹಿಡಿಯುವ ಅವಕಾಶ ಸಿಗಲಿ ಎಂದರು.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ವಿಧಾನಸಭಾ ಚುನಾವಣೆಯಿಂದ ನಗರಸಭೆ, ಪುರಸಭೆಗಳಲ್ಲೂ ಕೈ ಅಭ್ಯರ್ಥಿಗಳು ಜಯಗಳಿಸುತ್ತಿರುವ ಕಾರಣ ಪಕ್ಷ ದಿನೇ ದಿನೆ, ಶಕ್ತಿಯುತವಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಪದಾಧಿಕಾರಿಗಳಾದ ಕೆ.ಎಂ.ಹಾಲಸ್ವಾಮಿ, ಎಸ್.ಎನ್.ರವಿಕುಮಾರ್, ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಮಂಜುನಾಥ್, ಆರ್.ಕೆ.ಸರ್ದಾರ್, ಎಚ್.ಅಂಜಿನಪ್ಪ, ಜಿ.ಎಸ್.ಕುಮಾರ್‌ಗೌಡ, ಸೈಯದ್ ಖುದ್ದೂಸ್, ಎನ್.ಡಿ.ಕುಮಾರ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ, ಮಾಜಿ ಸದಸ್ಯ ಆರ್.ನರಸಿಂಹರಾಜು, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಬಿ.ಯೋಗೇಶ್‌ಬಾಬು, ನಗರಸಭೆ ಸದಸ್ಯ ನರಸಿಂಹಮೂರ್ತಿ, ನಾಮನಿರ್ದೇಶಕ ಸದಸ್ಯ ಟಿ.ನರಸಿಂಹಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net