ಉಪ ಚುನಾವಣೆ ಪಕ್ಷದ ಬಲವರ್ಧನೆ

TKE congr
ಅಜ್ಜಂಪುರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಜಿ.ನಟರಾಜ್, ಆರ್.ಕೃಷ್ಣಪ್ಪ, ನವೀನ್ ಇತರರಿದ್ದರು.
Published on

ತರೀಕೆರೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದರಿಂದ ಅಜ್ಜಂಪುರದ ಮಹಾತ್ಮ ಗಾಂಧಿ ವೃತ್ತದ ಬಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಕೆಪಿಸಿಸಿ ಸದಸ್ಯ ಜಿ.ನಟರಾಜ್ ಮಾತನಾಡಿ, ವಿಪಕ್ಷಗಳು ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಲುಕಿಸುವ ಪ್ರಯತ್ನ, ಸಲ್ಲದ ಆರೋಪ ಮಾಡಿದರೂ ಸೊಪ್ಪು ಹಾಕದ ಮತದಾರ ಉಪ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಈ ಗೆಲುವು ಪಕ್ಷ ಬಲವರ್ಧನೆಗೆ ಉಪಯುಕ್ತ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.

ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ ಮಾತನಾಡಿ, ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಯೋಜನೆಗಳು, ಸಿಎಂ ಸಿದ್ದರಾಮಯ್ಯ ಅವರ ದಕ್ಷ ಆಡಳಿತ ಉಪ ಚುನಾವಣೆ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ಆರ್.ಕೃಷ್ಣಪ್ಪ, ಪ್ರಮುಖರಾದ ಕೆ.ರಾಘವೇಂದ್ರ, ನವೀನ್, ಮಸ್ತಾಕ್ ಅಹಮದ್, ಅಕ್ಬರ್, ಪ್ರಸನ್ನಕುಮಾರ್, ಎಂ.ಪ್ರದೀಪ್‌ಕುಮಾರ್, ರಿಯಾಜ್ ಅಹಮದ್, ಜಯಕುಮಾರ್, ರಾಜಪ್ಪ, ಜಬೀವುಲ್ಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net