ಉಪ ಚುನಾವಣೆ ಮತ ಎಣಿಕೆ ಜೂ.೪ರಂದು

Published on

ಸುರಪುರ: ಎಸ್‌ಟಿ ಮೀಸಲು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಯಾದಗಿರಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಜೂ.೪ರಂದು ಬೆಳಗ್ಗೆ ೮ಕ್ಕೆ ಆರಂಭವಾಗಲಿದೆ ಎಂದು ಚುನಾವಣಾಧಿಕಾರಿ ಕಾವ್ಯರಾಣಿ ತಿಳಿಸಿದರು. ಇಲ್ಲಿನ ತಹಸಿಲ್ ಕಚೇರಿಯಲ್ಲಿ ಮಾತನಾಡಿದ ಅವರು, ಸುರಪುರ ಮತಕ್ಷೇತ್ರದಲ್ಲಿ ೨.೮೩ ಲಕ್ಷ ಮತದಾರರಿದ್ದು, ೨.೧೫ ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ.೭೬.೦೪ ಉತ್ತಮ ಮತದಾನವಾಗಿದೆ.

ಮತ ಎಣಿಕೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ೩೧೭ ಮತಗಟ್ಟೆಗಳ ಇವಿಎಂ ಯಂತ್ರಗಳಿವೆ. ೧೪ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಆರ್‌ಒ ನೇತೃತ್ವದಲ್ಲೇ ೨೩ ರೌಂಡ್ ಟೇಬಲ್‌ನಲ್ಲಿ ಮತ ಎಣಿಕೆ ನಡೆಯಲಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆಯಿಂದ ಆರಂಭವಾಗಲಿದೆ. ೫೦೦ ಪೋಸ್ಟಲ್ ಬ್ಯಾಲೆಟ್‌ಗೆ ಒಂದರAತೆ ಮೂರು ಟೇಬಲ್ ವ್ಯವಸ್ಥೆ ಮಾಡಲಾಗಿದೆ.

೧೩೧೧ ಪೋಸ್ಟಲ್ ಬ್ಯಾಲೆಟ್‌ನಿಂದ ಮತದಾನವಾಗಿದೆ ಎಂದು ಮಾಹಿತಿ ನೀಡಿದರು. ಮತ ಎಣಿಕೆಯಲ್ಲಿ ರಾಜಕೀಯ ಪಕ್ಷಗಳಿಂದ ಪಾಲ್ಗೊಳ್ಳುವರು ಮೂರು ದಿನ ಮುಂಚೆಯೇ ಪಾಸ್ ಪಡೆದುಕೊಳ್ಳುವುದು ಕಡ್ಡಾಯ. ಮತ ಎಣಿಕೆ ಕೇಂದ್ರದ ಸಹಾಯಕ ಅಧಿಕಾರಿ ಜಗನ್ನಾಥ ರೆಡ್ಡಿ, ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೊಡಿ, ಸುರಪುರ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net