ಉಪ್ಪಹಳ್ಳಿ ಗ್ರಾಮದಲ್ಲಿ ಬಿಜೆಪಿ ಸೇರ್ಪಡೆ

IMG-20230319-WA0175
ಕಂದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಂಡ ಸಿಮೆಂಟ್ ಮಂಜುನಾಥ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ರುದ್ರೇಗೌಡ, ಗಣೇಶ್ ಸ್ನೇಹಜೀವಿ, ಮೂರ್ತಿ ಕಂದಲಿ ಇತರರು ಇದ್ದರು.-
Published on

ಆಲೂರು: ಕಂದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಹಳ್ಳಿ ಗ್ರಾಮದಲ್ಲಿ ಸುಮಾರು 150ಕ್ಕೂ ಅಧಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇತ್ತೀಚೆಗೆ ಸಿಮೆಂಟ್ ಮಂಜುನಾಥ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಸರ್ಕಾರದ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ. ನಾವು ಎಲ್ಲರನ್ನೂ ಗೌರವಿಸುತ್ತೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅತೃಪ್ತ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಬಾರಿ ನಿರಾಯಸವಾಗಿ ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಮೆಂಟ್ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಬೈರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರೇಗೌಡ, ಸದಸ್ಯರಾದ ಗಣೇಶ್ ಸ್ನೇಹಜೀವಿ, ಮೂರ್ತಿ ಕಂದಲಿ, ಧರ್ಮೇಗೌಡ ಈಚಲಹಳ್ಳಿ, ಶಾಂತರಾಜು, ತಿಮ್ಮನಹಳ್ಳಿ, ಮಲ್ಲೇಶ್, ಪುಟ್ಟಸ್ವಾಮಿ, ಮಿಲ್ ಮಲ್ಲೇಶ್, ಕ್ಯಾಂಟೀನ್ ಚಂದ್ರು, ಕಂದಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಇಂದ್ರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net