ಚಾಮರಾಜನಗರ: ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಉಪ್ಪಾರ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಬುಧವಾರ ಪರಿಶೀಲನೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಉಪ್ಪಾರ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗಿದೆ. ಕೆಲ ಗ್ರಾಮಗಳಲ್ಲಿ ಭವನಗಳು ಪ್ರಗತಿಯಲ್ಲಿವೆ. ಸಮುದಾಯದ ಬಂಧುಗಳು ಭವನಗಳನ್ನು ಖಾಲಿ ಬಿಡದೆ, ಸದಾ ಚಟುವಟಿಕೆಯ ಕೇಂದ್ರಗಳನ್ನಾಗಿಸಬೇಕು. ಸಭೆ ಸಮಾರಂಭಗಳಿಗೆ ಅವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು. ಗ್ರಾ.ಪಂ ಮಾಜಿ ಅಧ್ಯಕ್ಷ ದೊರೆಸ್ವಾಮಿ, ನಾಗಯ್ಯ ನಾಗವಳ್ಳಿ, ನಿರ್ಮಿತಿ ಕೇಂದ್ರದ ಇಂಜಿನಿಯರ್ ಭೀಮ್ ಸಾಗರ್ ಮತ್ತು ಗ್ರಾಮಸ್ಥರು ಹಾಜರಿದ್ದರು.