

ಉಪ್ಪಿಟ್ಟು ಸೇವಿಸಿ 77 ವಿದ್ಯಾರ್ಥಿಗಳು ಅಸ್ವಸ್ಥ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಕಲುಷಿತ ಆಹಾರ ಸೇವಿಸಿದ ಪರಿಣಾಮ
ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೋರಾರ್ಜಿ ವಸತಿ ನಿಲಯದಲ್ಲಿ 77 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ಪರಿಣಾಮವಾಗಿ ವಿದ್ಯಾರ್ಥಿಗಳು ಹೊಟ್ಟೆನೋವು ಹಾಗೂ ವಾಂತಿ ಭೇದಿಯಿಂದ ಬಳಲಿದ್ದಾರೆ.ಕೂಡಲೇ ವಿದ್ಯಾರ್ಥಿಗಳನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಡಿಎಚ್ ಡಾ.ಎಸ್ ಎಸ್.ಗಡೇದ ಅವರು ತಿಳಿಸಿದ್ದಾರೆ.
ಆಸ್ಪತ್ರೆಗೆ ಡಿಡಿಪಿಐ ಸೀತಾರಾಮು ಆರ್.ಎಸ್.,ಟಿಎಚ್ ಓ ಡಾ.ಸುಕಮಾರ ಬಾಗಾಯಿ,ಭೇಟಿ ನೀಡಿದರು. ವಸತಿ ನಿಲಯದ ಸಿಬ್ಬಂದಿಗಳ ಬೇಜವಾಬ್ದಾರಿಂದ ಈ ಘಟನೆ ನಡೆದಿದೆ ಎಂದು ಪಾಲಕರು ಆರೋಪಿಸಿದ್ದಾರೆ. ತನಿಖೆಯಿಂದಷ್ಟ ನಿಖರವಾದ ಮಾಹಿತಿ ಲಭ್ಯವಾಗಲಿದೆ.