ಉರಿಲಿಂಗ ಪೆದ್ದಿ ಮಠಕ್ಕೆ ₹ 50 ಲಕ್ಷ ಅನುದಾನ

Nagmarpalli Memo
Published on

ಬೀದರ್: ಬಸವಕಲ್ಯಾಣ ತಾಲೂಕಿನ ಬೇಲೂರಿನ ಉರಿಲಿಂಗ ಪೆದ್ದಿ ಮಠದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಒದಗಿಸುವುದಾಗಿ ಸಮಾಜಕಲ್ಯಾಣ ಇಲಾಖೆ ಸಚಿವ ಶ್ರೀರಾಮಲು ಭರವಸೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾಡಿದ ಮನವಿಗೆ ಸಚಿವರು ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗೆ ಈ ಕುರಿತು ನಿರ್ದೇಶನ ಕೊಟ್ಟಿದ್ದಾರೆ.

ಉರಿಲಿಂಗ ಪೆದ್ದಿ ಮಠದಲ್ಲಿ ನಿರಂತರ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತವೆ. ಕರ್ನಾಟಕದ ಜತೆಗೆ ಮಹಾರಾಷ್ಟ್ರ ಹಾಗೂ ತೆಲಂಗಾಣದ ಭಕ್ತರು ಬರುತ್ತಾರೆ. ಆದರೆ, ವಾಸ್ತವ್ಯಕ್ಕೆ ಸಮುದಾಯ ಭವನ ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಸಮುದಾಯ ಭವನ ನಿರ್ಮಾಣಕ್ಕೆ ರೂ. 2 ಕೋಟಿ ಅನುದಾನ ಕಲ್ಪಿಸಿ ಮಠದ ಜೀರ್ಣೋದ್ಧಾರಕ್ಕೆ ನೆರವಾಗಬೇಕು ಎಂದು ನಾಗಮಾರಪಳ್ಳಿ ಕೋರಿದರು.

ಮಠಕ್ಕೆ 50 ಲಕ್ಷ ರೂ. ಅನುದಾನ ಕೊಡುವುದಾಗಿ ಸಚಿವರು ಭರವಸೆ ನೀಡಿದರು. ಉರಿಲಿಂಗಪೆದ್ದಿ ಮಠದ ಪಂಚಶ್ರೀ, ಮುಖಂಡ ಫರ್ನಾಂಡಿಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net