ಉಳ್ಳಾಲ ಎಸ್ ಎಸ್ ಎಲ್ ಸಿ ಪರೀಕ್ಷಾ ಕೊಠಡಿಯಲ್ಲಿ ಬೆಂಕಿ ಅವಘಡ ವಿದ್ಯಾರ್ಥಿಗಳ ಸ್ಥಳಾಂತರ

IMG_20210719_125341
Published on

ಮಂಗಳೂರು: ಉಳ್ಳಾಲ ಸಮೀಪ ಹೀರಾ ಪದವಿಪೂರ್ವ ಕಾಲೇಜಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೊಠಡಿಯ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಆಗಮಿಸಿ ಪರೀಕ್ಷೆ ಬರೆಯಲು ಆರಂಭಿಸಿದ್ದರು. 10.45 ರ ವೇಳೆಗೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪರೀಕ್ಷಾ ಮೇಲ್ವಿಚಾರಕರು ಗಾಬರಿಗೊಂಡು ಹೊರಗೆ ಓಡಿ ಬಂದಿದ್ದಾರೆ. ಬಳಿಕ ವಿದ್ಯಾರ್ಥಿಗಳು ಸಮೀಪದ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದರು.
ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗೂ ಉಳ್ಳಾಲ ಪೊಲೀಸರು ಭೇಟಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net