

ಬೇಲೂರು: ಇಲ್ಲಿನ ಪುರಸಭೆ ಉಪಾಧ್ಯಕ್ಷರಾಗಿ ಉಷಾ ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಭಾ ಕೌಸರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ಉಷಾ ಸತೀಶ್ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಿ ಸಮಯ ಮುಗಿಯುತ್ತಿದ್ದಂತೆ ಚುನಾವಣಾಧಿಕಾರಿಯಾಗಿದ್ದ ತಹಸೀಲ್ದಾರ್ ರಮೇಶ್ ಅವಿರೋಧ ಆಯ್ಕೆ ಘೋಷಿಸಿದರು.
ಸದಸ್ಯರ ಸಹಕಾರದಿಂದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ. ಎಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡುತ್ತೇನೆ ಎಂದು ಉಷಾ ಸತೀಶ್ ಹೇಳಿದರು.
ಪುರಸಭೆ ಅಧ್ಯಕ್ಷ ಸಿ.ಎನ್.ದಾನಿ, ಸದಸ್ಯರಾದ ಶಾಂತಕುಮಾರ್, ತೀರ್ಥಕುಮಾರಿ, ಜಮಾಲೂದ್ದೀನ್, ಸಭಾ ಕೌಸರ್, ಜಗದೀಶ್, ಪ್ರಭಾಕರ್, ಅಶೋಕ್, ರತ್ನಕ್ಕ, ಫಯಾಜ್, ಅಕ್ರಂ ಪಾಷಾ, ಪುಟ್ಟಸ್ವಾಮಿ, ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಸುಜಯ್ ಕುಮಾರ್ ಇತರರಿದ್ದರು.