ಉಸಿರುಗಟ್ಟಿಸಿ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

The offender is sentenced to life imprisonment
Published on

ಮೈಸೂರು: ಪತ್ನಿ ನಡತೆಯ ಬಗ್ಗೆ ಅನುಮಾನ ಪಟ್ಟು ಆಕೆಯನ್ನು ಕೊಲೆ ಮಾಡಿದ ಪತಿಗೆ ನಗರದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಪಿರಿಯಾಪಟ್ಟಣ ತಾಲೂಕಿನ ಬೂದಿತಿಟ್ಟು ಗ್ರಾಮದ ಸ್ವಾಮಿ ನಾಯಕ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿ.

ಇದೇ ತಾಲೂಕಿನ ಅಬ್ಬಳತಿ ಗ್ರಾಮದ ಸೌಮ್ಯಾಳನ್ನು ಈತ 7 ವರ್ಷ ಹಿಂದೆ ಪ್ರೀತಿಸಿ ಮದುವೆಯಾಗಿದ್ದ.

ಇವರಿಗೆ ಇಬ್ಬರು ಮಕ್ಕಳಿದ್ದಾರೆ. ತನ್ನ ಹೆಂಡತಿಯ ನಡತೆಯ ಕುರಿತು ಅನುಮಾನ ಪಟ್ಟು ಆಗಾಗ್ಗೆ ಗಲಾಟೆ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. 2022ರ ಮೇ 9ರಂದು ಮತ್ತೆ ಗಲಾಟೆ ಮಾಡಿ ತಲೆ ದಿಂಬಿನಿಂದ ಮುಖವನ್ನು ಅದುಮಿ ಉಸಿರುಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಿದ್ದ.

ಈ ಕುರಿತು ತನಿಖೆ ನಡೆಸಿದ ಪಿರಿಯಾಪಟ್ಟಣ ಠಾಣೆಯ ಪೊಲೀಸ್ ನಿರೀಕ್ಷಕ ಜಗದೀಶ್ ದೋಷಾರೋಪಣಾ ವರದಿ ಸಲ್ಲಿಸಿದ್ದರು.

ಸದರಿ ಪ್ರಕರಣದ ಕುರಿತು 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಈತನ ವಿರುದ್ಧದ ಆರೋಪಿಗಳು ಸಾಬೀತಾಗಿದ್ದು,

ಈ ಹಿನ್ನೆಲೆಯಲ್ಲಿ ಈತನಿಗೆ ಜೀವಾವಧಿ ಶಿಕ್ಷೆಯೊಂದಿಗೆ 5 ಸಾವಿರ ರೂ. ದಂಡ ಸಹ ವಿಧಿಸಲಾಗಿದೆ.

ಸರ್ಕಾರಿ ಅಭಿಯೋಜಕ ಬಿ.ಈ.ಯೋಗೇಶ್ವರ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net