ಋತುಚಕ್ರ ರಜೆ ಘೋಷಣೆಗೆ ಶಾಸಕ ಎಚ್.ಕೆ.ಸುರೇಶ್ ಸಂತಸ

Published on

ಬೇಲೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ನಾನು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ರಾಜ್ಯ ಸರ್ಕಾರ ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಘೋಷಿಸಿರುವುದಕ್ಕೆ ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸಮಿತಿ ಸಭೆ ರಚಿಸಿದ್ದು ಅದರಲ್ಲಿ ನಾನೂ ಸದಸ್ಯನಾಗಿದ್ದೇನೆ. ಕಳೆದ ಜುಲೈ 25ರಂದು ವಿಧಾನಸೌಧದಲ್ಲಿ ನಡೆದಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ನಾನು ಸರ್ಕಾರಿ ಸೇವೆಯಲ್ಲಿರುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಆದರೆ ನನ್ನ ಮನವಿಯನ್ನು ಪುರಸ್ಕರಿಸಿದ ಸರ್ಕಾರ ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಘೋಷಿಸಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net