ಎಂ.ಎಂ.ಎಂ.ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಸಾಣಾ ಶಿಬಿರ

ಎಂ.ಎಂ.ಎಂ.ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಸಾಣಾ ಶಿಬಿರ
Published on

ಹಾಸನ: ರೋಗದ ಲಕ್ಷಣ ಕಾಣುವ ಮುನ್ನವೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸೂಕ್ತ ಸಲಹೆಗಳನ್ನು ಪಾಲಿಸಿದರೆ ಆರೋಗ್ಯದಲ್ಲಿ ಮುಂದಾಗುವ ಪರಿಣಾವನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮಹಾಲಕ್ಷ್ಮೀ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಡಾ.ಉಮೇಶ್ ಹೇಳೀದರು.
ತಾಲೂಕಿನ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಹಾಲಕ್ಷ್ಮೀ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹಾಗೂ ಸೋಮನಹಳ್ಳಿ ಹಾಲು ಉತ್ಪಾದಕರ ಸಹಾಕರ ಸಂಘದ ವತಿಯಿಂದ ಬುಧವಾರ ನಡೆದ ಉಚಿತ ಆರೋಗ್ಯ ತಪಸಾಣಾ ಶಿಬಿರದಲ್ಲಿ ಮಾತನಾಡಿದ ಅವರು, ರೋಗಗಳು ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದು ಸಲಹೆ ನೀಡಿದರು.
ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು. ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಹಾಗೂ ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜನರಲ್ ಪಿಸಿಶಿಯನ್, ಮಕ್ಕಳ ತಜ್ಞರು, ಕೀಲು ಮತ್ತು ಮೂಳೆ ರೋಗ ತಜ್ಞರು, ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ತಜ್ಞರು, ಪುಸೂತಿ ಮತ್ತು ಸ್ತ್ರೀರೋಗ ತಜ್ಞರು, ಜನರಲ್ ಸರ್ಜನ್,ಸಾಮಾನ್ಯ ಶಸ್ತ್ರ ಚಿಕಿತ್ಸಾ ತಜ್ಞರು ಶಿಬಿರದಲ್ಲಿ ಉಚಿತವಾಗಿ ರಕ್ತದ ಒತ್ತದ ಪರೀಕ್ಷೆ, ಶುಗರ್ ಟೆಸ್ಟ್ ಮತ್ತು ಇಸಿಜಿ ಪರೀಕ್ಷೆ, ಕಣ್ಣಿನ ಪರೀಕ್ಷೆ ಸೇರಿದಂತೆ ಇನ್ನಿತರೆ ತಪಾಸಣೆ ಉಚಿತವಾಗಿ ನಡೆಸಿದರು. ಲಭ್ಯವಿರುವ ಔಷಧಿಯನ್ನು ಉಚಿತವಾಗಿ ನೀಡಲಾಯಿತು.)
ಈ ವೇಲೆ ಹಾಸನ ತಾಲೂಕು ಛಾಯಚಿತ್ರಾ ಗ್ರಾಹಕರ ಮಾಜಿ ಅಧ್ಯಕ್ಷ ನಿಂಗರಾಜು, ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ್ಳ ನಾಗರಾಜು, ಕಬ್ಬಳಿ ಗ್ರಾ.ಪಂ ಉಪಾಧ್ಯಾಕ್ಷ ಪುಟ್ಟರಾಜು, ನಾಗೇಂದ್ರ, ರಮೇಶ್, ಅಣ್ಣೀಗೌಡ್ರು, ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net