ಎಂಇಎಸ್ ಜತೆ ಯಾರೂ ಕೈಜೋಡಿಸಬೇಡಿ

27Jaggu2
ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಶೋಕ ಚಂದರಗಿ ಮಾತನಾಡಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಶಂಕರ ಇತರರಿದ್ದರು.
Published on

ಬೆಳಗಾವಿ: ರಾಷ್ಟ್ರೀಯ ಪಕ್ಷಳಾದ ಬಿಜೆಪಿ ಹಾಗೂ ಕಾಂಗ್ರೆಸ್, ಎಂಇಎಸ್ ಜತೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೈ ಜೋಡಿಸಿದರೆ ಕನ್ನಡ ಸಂಘಟನೆಗಳ ವಿರೋಧ ಇದೆ ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.

ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡುವಾಗ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ನಮಗೆಲ್ಲ ಅಸಮಾಧಾನ ಮೂಡಿಸಿದೆ. ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದರು.

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಕ್ರಿಯೆ ಆರಂಭವಾಗಿದ್ದು, 25 ವರ್ಷದ ಬಳಿಕ ರಾಷ್ಟ್ರೀಯ ಪಕ್ಷಗಳು ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಲಿದೆ. ಇದು ಪಾಲಿಕೆಯ ಇತಿಹಾಸದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ ಎಂದು ಚಂದರಗಿ ಅಭಿಪ್ರಾಯಪಟ್ಟರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಶಂಕರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net