

ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ. ಪಾಟೀಲï ಅವರನ್ನು ವಿವಿ ಪ್ರಾದೇಶಿಕ ಕೇಂದ್ರದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಕೇಂದ್ರದ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ನೇತೃತ್ವದಲ್ಲಿ ಸಿಬ್ಬಂದಿ ಪಾಟೀಲ್ ಅವರನ್ನು ಸನ್ಮಾನಿಸಿ ಶುಭ ಕೋರಿದರು. ಈ ವೇಳೆ ಇಲ್ಲಿನ ಕೇಂದ್ರದಲ್ಲಿ ಆಗಿರುವ ಪ್ರವೇಶ, ಶೈಕ್ಷಣಿಕ ಚಟುವಟಿಕೆ ಕುರಿತು ಮಾಹಿತಿ ಪಡೆದ ಅವರು, ಕೆಲ ಸಲಹೆಗಳನ್ನೂ ನೀಡಿದರು. ಕೇಂದ್ರದ ರುಕ್ಮಿಣಿ ಹಣಮಂತರಾವ ಬೈರಾಮಡಗಿ ಇತರರಿದ್ದರು.