ಎಂಎಸ್‌ಐಎಲ್ ಮಳಿಗೆ ಬೇಡವೆಂದ ಶಾಸಕ...!

23_10_Mdy_Mla News
Published on

ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯುವುದು ಬೇಡ ಎಂದು ಶಾಸಕ ಎಂ.ಶ್ರೀನಿವಾಸ್ ಹೇಳಿದರು.
ಗ್ರಾಮದ ಅಕ್ಕಮಹಾದೇವಿ ಮಹಿಳಾ ವಿವಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಮಹಿಳಾ ವಿವಿ, ಕೇಂದ್ರೀಯ ವಿದ್ಯಾಲಯವಿದೆ. ಇದಲ್ಲದೆ 200 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇಲ್ಲಿ ಮದ್ಯ ಮಾರಾಟ ಮಳಿಗೆ ಪ್ರಾರಂಭಿಸಿದರೆ ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡಿದಂತಾಗುತ್ತದೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮದ್ಯ ಮಾರಾಟ ನಡೆದರೆ ತೊಂದರೆ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಮಳಿಗೆ ತೆರೆಯದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net