ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ: ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರ ಸಂಭ್ರಮ

SOR WWWEEEB
Published on

ಸೊರಬ: ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವೆಂಬ ಮಾನ್ಯತೆ ಪಡೆದ ಹಿನ್ನೆಲೆಯಲ್ಲಿ ಆಪ್ ಕಾರ್ಯಕರ್ತರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಎಎಪಿ ತಾಲೂಕು ಅಧ್ಯಕ್ಷ ದಾನಪ್ಪ ನಾಯ್ಕ ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲುವ ಮೂಲಕ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಅರ್ಹತೆ ಪಡೆದಂತಾಗಿದೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಗುಜರಾತ್ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಸಾಧ್ಯವಾಗದೇ ಇರಬಹುದು ಆದರೆ ಈ ಚುನಾವಣೆಯ ಮೂಲಕ ಪಕ್ಷವು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿರುವುದು ಸಂತಸದ ವಿಷಯ. ಕ್ಷೇತ್ರದಲ್ಲಿಯೂ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬ ರಾಜಕೀಯವನ್ನು ಬದಿಗೊತ್ತಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಜನತೆಯಲ್ಲಿ ವಿನಂತಿಸಲಾಗುವುದು ಎಂದರು.

ಪಕ್ಷದ ತಾಲೂಕು ಸಂಯೋಜಕ ಗಣೇಶ್‌ಮಾತನಾಡಿ, ದೆಹಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ತಿರಸ್ಕರಿಸಿ, ಜನತೆ ಆಪ್ ಬೆಂಬಲಿಸಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಈ ಚುನಾವಣೆಯ ಮೂಲಕ ರಾಷ್ಟ್ರೀಯ ಪಕ್ಷದ ಆರ್ಹತೆ ಸಾಧಿಸಿರುವುದು ದೇಶದಲ್ಲಿ ಇತಿಹಾಸ ಸೃಷ್ಟಿಸಿದಂತಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net