ಎಎಸ್‌ಐಗಳಿಗಿಲ್ಲ ದಂಡ ಹಾಕುವ ಅಧಿಕಾರ

Published on

ಮೈಸೂರು: ಸಂಚಾರ ಉಲ್ಲಂಘನೆ ಪ್ರಕರಣಗಳಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುವ ಅಧಿಕಾರ ಎಎಸ್‌ಐಗಳಿಗೆ ಇಲ್ಲ ಎಂದು ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ತಿಳಿಸಿದರು.
ಸುಗಮ ಸಂಚಾರಕ್ಕಾಗಿ ಈ ಹಿಂದೆ ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳ ಜತೆಗೆ ಎಎಸ್‌ಐಗಳಿಗೂ ದಂಡ ವಿಧಿಸುವ ಅಧಿಕಾರ ನೀಡಲಾಗಿತ್ತು. ಆದರೆ ದಂಡದ ಹೆಸರಿನಲ್ಲಿ ದುರುಪಯೋಗ ಹೆಚ್ಚಾಗಿ ನಡೆಯುತ್ತಿದೆ ಎನ್ನುವ ದೂರುಗಳು ಸಾರ್ವಜನಿಕರಿಂದ ಬಂದಿದ್ದರಿಂದ ತಪಾಸಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಸಂಚಾರ ಉಲ್ಲಂಘನೆ ಪ್ರಕರಣದಲ್ಲಿ ದಂಡ ವಿಧಿಸುವ ಕೆಲಸ ಆರಂಭಗೊಂಡಿದ್ದು, ಸಬ್ ಇನ್ಸ್‌ಪೆಕ್ಟರ್‌ಗಳು, ಇನ್ಸ್‌ಪೆಕ್ಟರ್‌ಗಳಿಗೆ ಅಧಿಕಾರ ನೀಡಲಾಗಿದೆ. ಇವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net