ಎಕರೆಗೆ 30 ಸಾವಿರ ರೂ. ಪರಿಹಾರ ಘೋಷಿಸಿ

Prabhu Chavan
Published on

ಔರಾದ್: ಮಳೆಯಿಲ್ಲದೆ ರೈತರ ಬೆಳೆಗಳು ಒಣಗಿ ನಾಶವಾಗಿವೆ. ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಎಕರೆಗೆ ೩೦ ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ೧೫ ದಿನ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡರಿಗೆ ಮನವಿ ಪತ್ರ ಸಲ್ಲಿಸಿದ್ದು, ಸಚಿವರು ಔರಾದ್ ಕ್ಷೇತ್ರದಲ್ಲಿನ ಬೆಳೆಹಾನಿ ಕುರಿತು ಮಾಹಿತಿ ಪಡೆದಿದ್ದಾರೆ. ತೀವ್ರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬರಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ. ಮುಂಗಾರು ಆರಂಭದಲ್ಲಿ ಕೊರತೆ ಆಗಿತ್ತು. ಆಗಸ್ಟ್ನಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಆವರಿಸಿತ್ತು. ಎರಡು ಬಾರಿ ಬಿತ್ತನೆ ಮಾಡುವಂತಾಗಿತ್ತು. ಔರಾದ್ ಮತ್ತು ಕಮಲನಗರ ತಾಲೂಕು ಬರ ಪೀಡಿತ ಪ್ರದೇಶ ಎಂದು ಘೋಷಿಸಿ, ರೈತ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net