ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

11.npk-4
Published on

ನಾಪೋಕ್ಲು: ಇಲ್ಲಿಗೆ ಸಮೀಪದ ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೀತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್‌ನಲ್ಲಿ ತಾನಿಕ್ ತಮ್ಮಯ್ಯ, ಈತನ್ ಪೂವಣ್ಣ, ಆರವ್ ಅಯ್ಯಪ್ಪ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ಚಿನ್ಮಯ್, ನಿಶಾಂತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದ ಫುಟ್ಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯಶಿಕ್ಷಕ ಚೋಕಿರ ತಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಅಂಜಪರವಂಡ ರೋಶನ್ ಮಾದಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net