ಎಚ್.ಎಸ್.ವೆಂಕಟೇಶಮೂರ್ತಿ ನಿಧನಕ್ಕೆ ಕಸಾಪ ಸಂತಾಪ

Published on

ಚಾಮರಾಜನಗರ: ನಾಡಿನ ಹೆಸರಾಂತ ಕವಿ ಎಚ್.ಎಸ್.ವೆಂಕಟೇಶ್‌ಮೂರ್ತಿ ಅವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಋಗ್ವೇದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾವಗೀತೆಗಳು, ಪ್ರಬಂಧ, ಕಾದಂಬರಿ, ಅನುವಾದ, ವಿಮರ್ಶೆ, ನಾಟಕಗಳ ಮೂಲಕ ಎಚ್.ಎಸ್.ವೆಂಕಟೇಶಮೂರ್ತಿ ಅವರು ಕನ್ನಡದ ಆಸ್ತಿಯಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net