ಎಚ್.ವೈ.ಮೇಟಿಗೆ ಸಚಿವ ಸ್ಥಾನ ನೀಡಿ

bkt-17-7
ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಬುಧವಾರ ಮುಸ್ಲಿಂ ಸಮಾಜದ ಮುಖಂಡ ಅಬ್ದುಲ್ ರಜಾಕ ಕಲಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಮೀನಸಾಬ ರಕ್ಕಸಗಿ, ಬಂದೇನವಾಜ ರಬಕವಿ, ಯಾಶೀನಖಾನ ಪಠಾಣ, ಅಬ್ದುಲ್‌ರಜಾಕ ನದಾಫ, ಮೊಹಮ್ಮದಸಾಬ ಮುಜಾವರ ಇತರರು ಇದ್ದರು.
Published on

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಶಾಸಕ ಎಚ್.ವೈ.ಮೇಟಿ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ ೯ ಮುಸ್ಲಿಂ ಸಮಾಜದ ಶಾಸಕರು ಆಯ್ಕೆಯಾಗಿದ್ದು, ೫ ಜನಕ್ಕೆ ಮಂತ್ರಿಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮಾಜದ ಮುಖಂಡ ಅಬ್ದುಲ್ ರಜಾಕ ಕಲಾಲ ಹೇಳಿದರು.

ನಗರದ ಪ್ರೇಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ವೈ.ಮೇಟಿ ಅವರು ಹಿರಿಯ ರಾಜಕಾರಣಿ, ಈಗಾಗಲೇ ಸಚಿವರಾಗಿ ಕೆಲಸ ಮಾಡಿದ ಅನುಭವ ಇದ್ದು, ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರನ್ನಾಗಿ ಆಯ್ಕೆ ಮಾಡಬೇಕು.ಬಾಗಲಕೋಟೆ ಮತ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸಿದ್ದೇವೆ. ನಮ್ಮ ಸಮುದಾಯದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಮಾಮ ಜಾಫರ ಬೇಪಾರಿ ಅವರನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಅಮೀನಸಾಬ ರಕ್ಕಸಗಿ, ಬಂದೇನವಾಜ ರಬಕವಿ, ಯಾಶೀನಖಾನ ಪಠಾಣ, ಅಬ್ದುಲ್‌ರಜಾಕ ನದಾಫ, ಮೊಹಮ್ಮದಸಾಬ ಮುಜಾವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net