

ಆಲೂರು : ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಎಚ್ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಧೈರ್ಯ ತುಂಬುವುದೇ ವಿಶ್ವ ದಿನಾಚರಣೆಯ ಮುಖ್ಯ ಉದ್ದೇಶವಾಗಿತ್ತು ಎಚ್ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸದಸ್ಯ ಕಾರ್ಯದರ್ಶಿ ಎಂ.ಸಿ.ನಿರ್ಮಲ ತಿಳಿಸಿದರು.
ಅವರು ಆಲೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ,ಹಾಗೂ ಸರ್ಕಾರಿ ಪದವಿ ಕಾಲೇಜ್ ವತಿಯಿಂದ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಏಡ್ಸ್ ಕಾಯಿಲೆ ಬಗ್ಗೆ ತಿಳಿಯುವುದು ಅತ್ಯವಶ್ಯಕವಾಗಿದೆ ಆದರೆ ಏಡ್ಸ್ ಪ್ರಸ್ತುತ ಮಾರಣಾಂತಿಕವಲ್ಲ ಸೂಕ್ತ ಮತ್ತು ನಿಯಮಿತ ಚಿಕಿತ್ಸೆಯಿಂದ ಇದನ್ನು ನಿಯಂತ್ರಿಸಬಹುದು ಹೆಚ್ ಐ ವಿ ಪೀಡಿತರನ್ನು ಎಲ್ಲರಂತೆ ಕಾಣಬೇಕು ಏಡ್ಸ್ ಬಗ್ಗೆ ಇರುವ ಮೌಢ್ಯತೆಯನ್ನು ಮಟ್ಟ ಹಾಕುವ ದಿನ ಇದಾಗಿದ್ದು ಇದು ಕೂಡ ಸಕ್ಕರೆ ಮತ್ತು ಇತರೆ ಕಾಯಿಲೆ ರೀತಿಯ ಒಂದು ಕಾಯಿಲೆಯಾಗಿದೆ ಚಿಕಿತ್ಸೆಯಿಂದ ಸೂಕ್ತವಾಗಿ ನಿಯಂತ್ರಿಸಬಹುದು ಹಾಗೂ ಈ ಸೋಂಕಿನ ಕುರಿತಾದ ಅರವಿನಿಂದ ಇದನ್ನು ದೂರ ಇಡಬಹುದು ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ನೀಡಬೇಕು ನಿಮ್ಮ ನಂಬಿದ ತಂದೆ-ತಾಯಿ ಹಾಗೂ ವಿದ್ಯ ಕಲಿಸಿದ ಗುರುಗಳಿಗೆ ಕೀರ್ತಿ ತನ್ನಿ ಎಂದರು.
ತಾಲ್ಲೂಕು ಆರೋಗಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿಎಚ್ಐವಿ ಏಡ್ಸ್ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದರ ಜೊತೆಗೆ ಇದರ ಪರಿಪೂರ್ಣ ಜ್ಞಾನ ಪಡೆಯುವದು ಅಗತ್ಯ ರೋಗ ನಿರೋಧಕ ಶಕ್ತಿ ಕಡಿಮೆಯಾದಲ್ಲಿ ಹಲವು ರೋಗಗಳು ದಾಳಿ ಮಾಡುತ್ತವೆ ಆದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಪೌಷ್ಟಿಕ ಆಹಾರವನ್ನು ಪಡೆಯಬೇಕು ಆರೋಗ್ಯಯುತ ಜೀವನ ನಡೆಸುವತ್ತ ಗಮನ ಹರಿಸಬೇಕು ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್.ಐ. ವಿ / ಏಡ್ಸ್.ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ. ಹೀಗಾಗಿ ಈ ಸೋಂಕಿಗೊಳಗಾದವರು ನಡೆಸುವ ಹೋರಾಟದ ಯಶಸ್ಸಿಗೆ ಧೈರ್ಯ ತುಂಬಲು ಸಂಕಲ್ಪವನ್ನು ಮಾಡುವಂತಹ ಮಹತ್ವದ ದಿನ ವಿಶ್ವ ಏಡ್ಸ್ ದಿನವಾಗಿದೆ. ಏಡ್ಸ್ ಸೋಂಕನ್ನು ಮೊಟ್ಟ ಮೊದಲ ಬಾರಿಗೆ 1981ರಲ್ಲಿ ಅಮೆರಿಕದಲ್ಲಿ ಗುರುತಿಸಲಾಯಿತು. ಭಾರತದಲ್ಲಿ 1986ರಲ್ಲಿ ಚೆನ್ನೈನಲ್ಲಿ ಪತ್ತೆ ಮಾಡಲಾಯಿತು. ಏಡ್ಸ್‌ಗೆ ಕಾರಣವಾದ ವೈರಸ್ ಹೆಚ್‌ಐವಿ ಇದನ್ನು ಮೊಟ್ಟಮೊದಲ ಬಾರಿಗೆ 1983ರಲ್ಲಿ ಫ್ರೆಂಚ್ ವಿಜ್ಞಾನಿಗಳು ಪತ್ತೆ ಹಚ್ಚಿದರು ವಿದ್ಯಾರ್ಥಿಗಳು ಏಕಾಗ್ರತೆ ಕಳೆದುಕೊಳ್ಳಬಾರದು ಅನಗತ್ಯ ವಿಷಯದ ಕಡೆ ಹೆಚ್ಚಿನ ಲಕ್ಷ್ಯ ನೀಡಿ ಓದಿನ ಕಡೆ ಕಡಿಮೆ ಸಮಯ ನೀಡಿದರೆ ಭವಿಷ್ಯ ಹಾಳಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಮೋಹನ್ ಕುಮಾರ್, ಡಿ.ಕೆ.ಮಂಜಯ್ಯ, ಮೋಹನ್ ಕುಮಾರ್, ವಕೀಲರಾದ ಮಂಜೇಗೌಡ, ಆರ್.ಬಿ.ಸುರೇಶ್,ಆರೋಗ್ಯ ಇಲಾಖೆ ಶಿಕ್ಷಣಾದಿಕಾರಿ ಸತೀಶ್,ಹಾಗೂ ಇತರರು ಉಪಸ್ಥಿತರಿದ್ದರು.