

ಚಿತ್ರದುರ್ಗ: ಲೋಕಸಭಾ ಚುನಾವಣೆ ಮತ ಎಣಿಕೆ ಜೂನ್ 4ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಎಣಿಕೆಗೆ ನಿಯೋಜಿತರಾಗಿರುವ ಅಧಿಕಾರಿ- ಸಿಬ್ಬಂದಿಗೆ ಖಡಕ್ಕಾಗಿ ಸೂಚಿಸಿದರು.
ಸಹಾಯಕ ಚುನಾವಣಾಧಿಕಾರಿಗಳು,ಮತ ಎಣಿಕೆಗೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗೆ ಡಿಸಿ ಕಚೇರಿಯಲ್ಲಿ ಮಂಗಳವಾರ ಏರ್ಪ ಡಿ ಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು,ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆದಿದೆ. ಕ್ಷೇತ್ರ ವ್ಯಾಪ್ತಿಯ ತಹಸೀಲ್ದಾರ್‌ಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳ ಮತ ಎಣಿಕೆಗೆ ಅಗತ್ಯವಿರುವ ಸಿಬ್ಬಂದಿ ನಿಯೋಜಿಸಬೇಕು. ಹೆಚ್ಚುವರಿ ನಿಯೋಜನೆ ಸಲ್ಲದು.
ಎಣಿಕೆ ದಿನದಂದು ಸಕಾಲದಲ್ಲಿ ಕೇಂದ್ರದಲ್ಲಿ ಅಧಿಕಾರಿ-ಸಿಬ್ಬಂದಿ ಹಾಜರಿರ ಬೇಕು. ಅನವಶ್ಯಕ ಚರ್ಚೆಗಳಿಗೆ ಅವಕಾಶ ವಿಲ್ಲದಂತೆ ಕಾ ರ್ಯನಿರ್ವಹಿಸ ಬೇಕೆಂದರು. ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿ ತಾಲೂಕುವಾರು ಪ್ರತ್ಯೇಕವಾಗಿ ಮತಎಣಿಕೆ ನಡೆಯಲಿದೆ. ಪ್ರತಿ ಸುತ್ತಿನ ಮತಎಣಿಕೆಯ ದಾಖಲೆಗಳನ್ನು ನಿರ್ವಹಿಸಿ,ಸಕ್ಷಮ ಅಧಿಕಾರಿಗಳಿಗೆ ನೀಡಿ ಸಹಿ ಪಡೆದುಕೊಳ್ಳಬೇಕು. ಇದರ ಸಂಪೂರ್ಣ ಜವಾ ಬ್ದಾರಿ ತಹಸೀಲ್ದಾರ್‌ಗಳಾದ್ದರಾಗಿರುತ್ತದೆ. ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ಎಣಿಕೆ ನಡೆಯಲಿದೆ ಎಂದರು.
ಎಣಿಕೆ ತರಬೇತಿಗೆ ದಿನಾಂಕ ನಿಗದಿಪಡಿಸಲಾಗಿದೆ. ಸುಗಮವಾಗಿ ಎಣಿಕೆ ನಡೆಸಲು ಹಾಗೂ ಈ ಎಲ್ಲ ವಿದ್ಯಾಮಾನಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವುದರ ಜತೆಗೆ ವ್ಯವಸ್ಥಿತವಾಗಿ ದಾಖಲೆಗಳನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲದಲ್ಲಿ ಎಣಿಕೆ ಆರಂಭಿಸಿ ತ್ವರಿತವಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳ ಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿ ತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಅಗತ್ಯ ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗು ವುದೆಂದರು. ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ,ಎಸಿ ಎಂ.ಕಾರ್ತೀಕ್,ಆಹಾರ ಇಲಾಖೆ ಡಿಡಿ ಕೆ.ಪಿ.ಮಧುಸೂದನ್,ಚಿತ್ರದು ರ್ಗ ತಹಸೀಲ್ದಾರ್ ಡಾ.ನಾಗವೇಣಿ,ಶಿರಾ,ಪಾವ ಗಡ ತಾಲೂಕು ಸೇರಿದಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳು ಮತ್ತಿತರರು ಇದ್ದರು.
(ಸಿಟಿಡಿ 21 ಮತ ಎಣಿಕೆ ಮೀಟಿಂಗ್)
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕುರಿತಂತೆ ಚಿತ್ರದುರ್ಗದಲ್ಲಿ ಮಂಗಳವಾರ ಡಿಸಿ ಟಿ.ವೆಂಕಟೇಶ್ ಅಧ್ಯಕ್ಷತೆ ಅಧಿಕಾರಿ ಗಳ ಸಮಾಲೋಚನಾ ಸಭೆ ನಡೆಯಿತು. ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್,ಅಧಿಕಾರಿಗಳಾದ ಡಾ.ನಾಗವೇಣಿ,ವಿವೇಕ್, ಮಹೇಂದ್ರಕುಮಾರ್,ಆನಂದ್ ಮತ್ತಿತರರು ಇದ್ದರು.