ಎಚ್‌ಡಿಕೆ- ಎಚ್‌ಡಿಡಿ ಜನ್ಮದಿನ ಆಚರಣೆ:ಶ್ರೀ ನಿಲುಬಾಗಿಲು ಆಂಜನೇಯ ದೇವಸ್ಥಾನದಲ್ಲಿ ಪೂಜೆ

ಎಚ್‌ಡಿಕೆ- ಎಚ್‌ಡಿಡಿ ಜನ್ಮದಿನ ಆಚರಣೆ:ಶ್ರೀ ನಿಲುಬಾಗಿಲು ಆಂಜನೇಯ ದೇವಸ್ಥಾನದಲ್ಲಿ ಪೂಜೆ
Published on

ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಬೆಳಿಗ್ಗೆ ನಗರದ ದೇವಿಗೆರೆ ಬಳಿ ಇರುವ ಶ್ರೀ ನಿಲುಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದೆ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ 64ನೇ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣನವರ 66ನೇ ಜನ್ಮ ದಿನದ ಅಂಗವಾಗಿ ನಿಲುಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ, ಇಬ್ಬರೂ ನೂರ್ಕಾಲ ಆರೋಗ್ಯವಾಗಿ ಇರಲೆಂದು ಬೇಡಿಕೊಳ್ಳಲಾಗಿದೆ ಎಂದರು.
ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಹರಿಹಾರ ಎನಿಸಿಕೊಂಡಿರುವ ರೇವಣ್ಣನವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಎಲ್ಲಾ ಕ್ಷೇತ್ರಗಳಲ್ಲೂ ಕೂಡ ಅಬಿವೃದ್ಧಿ ಕೆಲಸ ಮಾಡಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರೈತ ಪರವಾದ ಆಡಳಿತ ನೀಡುವ ಮೂಲಕ ಸಾವಿರಾರು ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದಾರೆ. ರೈತಪರ, ಕಾರ್ಮಿಕರ ಪರ, ಜನಪರವಾದ ಆಡಳಿತವನ್ನು ನೀಡಿ ಅವರು ತಮ್ಮದೆಯಾದ ಹೆಸರನ್ನು ಗಳಿಸಿದ್ದಾರೆ. ಅವರಿಗೆ ಭಗವಂತ ಒಳ್ಳೆಯದನ್ನು ಮಾಡಿ ಆರೋಗ್ಯ, ಆಯಸ್ಸು, ಅಧಿಕಾರ ನೀಡಲೆಂದು ಹಾಗೂ ಇನ್ನೂ ಉನ್ನತ ಅಧಿಕಾರಗಳು ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಸಿಹಿ ಹಂಚಲಾಗಿದೆ ಎಂದು ಹೇಳಿದರು.
ಇದೆ ವೇಳೆ ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ನಗರಸಭೆ ಸದಸ್ಯ ಗಿರೀಶ್ ಚನ್ನವೀರಪ್ಪ, ಜಿಲ್ಲಾ ಮಾಧ್ಯಮ ವಕ್ತಾರ ಹೊಂಗೆರೆ ರಘು, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಟಿ. ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಲಕ್ಷ್ಮಣ್, ರುದ್ರಪ್ಪ, ಸಂಗಮ್, ಕಾರ್ಲೇ ಇಂದ್ರೇಶ್, ಗಿರೀಶ್, ಚಂದ್ರಿಕಾ, ನಿರ್ಮಲಾ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net