ಬಳ್ಳಾರಿ : ಸಂಡೂರು ತಾಲೂಕಿನ ಜಿಂದಾಲ್‌ನ ವಿದ್ಯಾನಗರದಲ್ಲಿ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ, ತೋರಣಗಲ್ಲು ಜೆಎಸ್‌ಡಬ್ಲೂ ಫೌಂಡೇಷನ್ ಸಹಯೋಗದೊಂದಿಗೆ ಆ. 01 ಮತ್ತು 02 ರಂದು ಎಜುಕಾನ್ 2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಏರ್ಪಡಿಸಲಾಗಿದೆ. ಆ.01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್. ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಕೆ. ಎಸ್.ಆಕಾಶ್ ಸೇರಿದಂತೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.