ಎಟಿಎಂ ಕಳ್ಳತನಕ್ಕೆ ಯತ್ನ

cctv cameras
Published on

ಚಿತ್ರದುರ್ಗ: ಸರಸ್ವತಿ ಪುರ ಬಡಾವಣೆಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ದೋಚಲು ಮುಖಕ್ಕೆ ಮಂಕಿ ಕ್ಯಾಪ್ ಧರಿಸಿ, ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ವರ್ಣದ ಸ್ಪ್ರೇ ಮಾಡಲು ಮುಂದಾದ ಕಳ್ಳನೊಬ್ಬ ನಡೆಸಿದ ಯತ್ನದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಭಾನುವಾರ ಬೆಳಕಿಗೆ ಬಂದಿದೆ.

ಈ ಕುರಿತು ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net