ಎಡಿಜಿಪಿ ಗನ್ ಮ್ಯಾನ್ ಶಿವಾಜಿರಾವ್ ಸಾವು

Published on

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಎಡಿಜಿಪಿ ಗನ್ ಮ್ಯಾನ್ ಚಿಕಿತ್ಸೆಗೆ ಸ್ಪಂದಿಸದೆ ನಗರದ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ನಗರದ ವಿ.ವಿ. ಮೊಹಲ್ಲಾ ನಿವಾಸಿ ಶಿವಾಜಿರಾವ್ (41) ಮೃತರು. ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್ ಸಶಸ್ತ್ರ ಪಡೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಬಂದಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಗನ್‌ಮ್ಯಾನ್ ಆಗಿದ್ದರು. ಗಾಲ್ ಬ್ಲಾಡರ್, ಥೈರಾಯ್ಡ , ಜಾಂಡಿಸ್ ಸಮಸ್ಯೆಗಳಿಂದ ಬಳಲುತ್ತಿದ್ದ ಶಿವಾಜಿರಾವ್ ಅವರನ್ನು ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net