ಎತ್ತಿನ ಗಾಡಿಯಲ್ಲಿ ಗಣೇಶ ವಿಸರ್ಜನೆ.

ಎತ್ತಿನ ಗಾಡಿಯಲ್ಲಿ ಗಣೇಶ ವಿಸರ್ಜನೆ.
Published on

ಬೇಲೂರು : ತಾಲೂಕಿನ ಹಳೇ ಹಗರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಭಕ್ತರ ಸಮ್ಮುಖದಲ್ಲಿ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು.

ವಿಶೇಷವೆಂದರೆ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಹಬ್ಬದಂದು ಪ್ರತಿಷ್ಠಾಪಿಸಿ ಪ್ರತಿನಿತ್ಯ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗುತಿತ್ತು. ಆದರೆ ಗುರುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸುವ ಅಂಗವಾಗಿ ಜೋಡಿ ಎತ್ತಿನ ಗಾಡಿಯಲ್ಲಿ ಗಣೇಶನನ್ನು ಕಳ್ಳಿರಿಸಿ ವಿವಿಧ ಪುಷ್ಪಗಳಿಂದ ಮಂಟಪವನ್ನು ಸಿಂಗರಿಸಿ ಹಗರೆಯ ಪ್ರಮುಖ ಬೀದಿಗಳಲ್ಲಿ ವಾದ್ಯದೊಂದಿಗೆ ಮೆರವಣಿಗೆ ನಡೆಸಿ ಗ್ರಾಮದ ಕೆರೆಯಲ್ಲಿ ಭಕ್ತರ ಸಮ್ಮುಖದಲ್ಲಿ ವಿಸರ್ಜಿಸಲಾಯಿತು. ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net