ಶಿಗ್ಗಾಂವಿ: ಲಾರಿ ಚಾಲಕನೊಬ್ಬ ತನ್ನ ಮುಂಬದಿ ಹೊರಟ್ಟಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಎನ್‌ಎಚ್-48ರಲ್ಲಿ ಭಾನುವಾರ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಂಕರ ಬಸವರಾಜ ಮಳಕೇರಿ (36) ಮೃತ ವ್ಯಕ್ತಿ.
ಈತ ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಎದುರಿಗೆ ಹೊರಟಿದ್ದ ಯಾವುದೋ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.