ಎನ್.ಡಿ.ಆರ್.ಕೆ ಕಾಲೇಜಿನಲ್ಲಿ ವಾಣಿಜ್ಯ ವಸ್ತು ಪ್ರದರ್ಶನ

ಎನ್.ಡಿ.ಆರ್.ಕೆ ಕಾಲೇಜಿನಲ್ಲಿ ವಾಣಿಜ್ಯ ವಸ್ತು ಪ್ರದರ್ಶನ
Published on

ಹಾಸನ: ವಿದ್ಯಾರ್ಥಿಗಳ ಕ್ರೀಯಾಶೀಲತೆ ಹೊರಹೊಮ್ಮಲು ಪಠ್ಯೇತರ ಚಟುವಟಿಕೆಗಳು ಹೆಚ್ಚು ಸಹಾಯವಾಗುತ್ತವೆ ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹೆಚ್.ಎನ್. ಹರೀಶ್ ಹೇಳಿದರು .

ನಗರದ ಪ್ರತಿಷ್ಠಿತ ಎನ್.ಡಿ.ಆರ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ ವಾಣಿಜ್ಯ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ವಯಂ ಆಸಕ್ತಿ ಮತ್ತು ಪ್ರಯತ್ನದಿಂದ ಹೊಸ ವಾಣಿಜ್ಯ ಪರಿಕರಗಳನ್ನು ಸಿದ್ದಪಡಿಸಿ ತಮ್ಮ ಪ್ರತಿಭೆಯನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸಾಕಷ್ಟು ಅವಕಾಶಗಳಿವೆ. ಪ್ರತಿ ವಿದ್ಯಾರ್ಥಿಗಳು ಬೌದ್ಧಿಕ ಸಾಮರ್ಥ್ಯ, ಕ್ರಿಯಾಶೀಲತೆ ಹಾಗೂ ಪ್ರತಿಭೆಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ರವಿಕಾಂತ್, ಉಪ ಪ್ರಾಂಶುಪಾಲ ಎ.ಅಕ್ಷತಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರದೀಪ್, ಸ್ನಾತಕೋತ್ತರ ಸಂಯೋಜಕ ಎ.ಜೆ.ಪ್ರಿಯಾ ಸೇರಿದಂತೆ ಬೋಧಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಇದೇ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದಂತೆ ವಸ್ತುಗಳನ್ನು ತಯಾರಿಸಿ ಪ್ರದರ್ಶನಕ್ಕೆ ಇಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net