ಎನ್‌ಇಪಿ ಕೈಬಿಡದಿರಲು ಎಬಿವಿಪಿ ಒತ್ತಾಯ

CTD 13 ABVP--001
Published on

ಚಿತ್ರದುರ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಕೈ ಬಿಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಎಬಿವಿಪಿ ಕಾರ‌್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಏಕ ಶಿಕ್ಷಣ ಪದ್ಧತಿ ಇರಬೇಕು ಹಾಗೂ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಕೌಶಲ ಆಧಾರಿತ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ ಉದ್ದೇಶವಾಗಿದೆ ಎಂದರು.
ಆದರೆ, ರಾಜ್ಯ ಸರ್ಕಾರ, ರಾಷ್ಟ್ರೀಯತೆಯ ವಿರುದ್ಧವಾಗಿ ಪ್ರತ್ಯೇಕತೆಯ ಕಡೆಗೆ ಹೆಜ್ಜೆ ಇಡುತ್ತಿರುವ ಕಾರಣ ಕರ್ನಾಟಕದ ಅಭಿವೃದ್ಧಿ ಹಿಮ್ಮುಖವಾಗಿ ಸಾಗಿದೆ. ಯುಜಿಸಿ ನಿಯಮಾವಳಿಗಳನ್ನು ಕಡೆಗಣಿಸುವ ನೀತಿಯನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿವುದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಯುಪಿಎಸ್‌ಸಿ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ವಂಚನೆಯಾಗಲಿದೆ ಎಂದು ಹೇಳಿದರು.
ರಾಜಕೀಯ ಕಾರಣಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡಲು ಸರ್ಕಾರ ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರ‌್ಯಕರ್ತರು, ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಮುಖಂಡರಾದ ಕನಕರಾಜ್ ಕೋಡಿಹಳ್ಳಿ, ಗೋಪಿ, ಚಂದನಾ, ಚಿತ್ರಸ್ವಾಮಿ, ದರ್ಶನ್, ಮಧು, ಮನೋಜ್, ಯುವರಾಜ್ ಮತ್ತಿತರ ಪರಿಷತ್ ಕಾರ‌್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net