ಎನ್ಇಪಿ ಮೂರನೇ ವರ್ಷದ ವಾರ್ಷಿಕೋತ್ಸವ ಜು.29ಕ್ಕೆ

SIDDARUDA METRI
Published on

ಕೊಪ್ಪಳ:ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ ಜು.29 ಮೂರು ವರ್ಷವಾಗಿದ್ದು, ದೆಹಲಿಯಲ್ಲಿ ಶುಕ್ರವಾರ ಅದ್ದೂರಿ ವಾರ್ಷಿಕೋತ್ಸವ ನಡೆಯಲಿದೆ ಎಂದು ಕೊಪ್ಪಳ ಕೇಂದ್ರೀಯ ವಿದ್ಯಾಲಯ ಪ್ರಾಚಾರ್ಯ ಸಿದ್ಧಾರೂಢ ಮೇತ್ರಿ ತಿಳಿಸಿದರು.


ನಗರದಲ್ಲಿ ಶುಕ್ರವಾರ ಸುದ್ದಿಗೊಷ್ಠಿ ಉದ್ದೇಶಿಸಿ ಮಾತನಾಡಿದರು.


ಗುಣಮಟ್ಟ, ಸಮಾನ ಶಿಕ್ಷಣ ವ್ಯವಸ್ಥೆಯನ್ನು ನೂತನ ಶಿಕ್ಷಣ ನೀತಿ ಒಳಗೊಂಡಿದೆ. ಕಠಿಣ ವಿಷಯಗಳನ್ನು ಪ್ರಾಯೋಗಿಕವಾಗಿ ಕಲಿಯಲು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಜಗತ್ತಿನೊಂದಿಗೆ ಪೈಪೋಟಿ ನೀಡಲು ಬೇಕಾಗುವ ಕೌಶಲಾಧಾರಿತ ವ್ಯವಸ್ಥೆಯಾಗಿ ರೂಪಿಸಲಾಗಿದೆ. 21ನೇ ಶತಮಾನಕ್ಕೆ ತಕ್ಕಂತೆ ರೂಪಿಸಿದ್ದು, ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಕೌಶಲ ಹೊರತರಲು ಅನುಕೂಲವಾಗಿದೆ. ಈ ಮೂಲಕ ಮಗು ಇಷ್ಟಪಟ್ಟ ಕ್ಷೇತ್ರದಲ್ಲಿ ಉತ್ತನ ಶಿಕ್ಷಣ ಪಡೆದು ಸಾಧನೆ ಮಾಡಲು ಪೂಕರವಾಗಿದೆ. ಜತೆಗೆ ಮಗು ಮೂರು ವರ್ಷ ಇರುವಾಗಲೇ ಶಿಕ್ಷಣ ನೀಡಲಾಗುತ್ತಿದೆ. ನರ್ಸರಿ, ಎಲ್‌ಕೆಜಿ, ಯುಕೆಜಿ ಕಲಿಕೆ ಆರಂಭವಾಗಲಿದೆ. ಕೊಪ್ಪಳ ಕೇಂದ್ರೀಯ ವಿದ್ಯಾಲಯದಲ್ಲಿ ಈ ವರ್ಷದಿಂದ ಯುಕೆಜಿ ಆರಂಭವಾಗಿದೆ. ಎಸ್ಸೆಸ್ಸೆಲ್ಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. 425 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದರು.


2020ರಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗಿದ್ದು, ಯಶಸ್ವಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಅದರ ಅಂಗವಾಗಿ ಆಯಾ ಜಿಲ್ಲಾಮಟ್ಟದಲ್ಲಿ ಜನರಿಗೆ ಮಾಹಿತಿ ನೀಡಲು ನಮಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ನವೋದಯ ವಿದ್ಯಾಲಯ ಪ್ರಾಚಾರ್ಯೆ ಗಾಯತ್ರಿ, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳಾದ ಡಾ.ಚಕ್ರವರ್ತಿ, ಸೈಯದ್ ರಿಯಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net