ಎನ್​ಎಸ್​ಎಸ್​ ಚಟುವಟಿಕೆಗಳಲ್ಲಿ ಭಾಗವಹಿಸಲಿ

3
Published on

ಬೆಲಹೊಂಗಲ: ಕ್ರೀಡೆ, ಸಾಂಸತಿಕ ಚಟುವಟಿಕೆಗಳು ಮತ್ತು ಎನ್​ಎಸ್​ಎಸ್​ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ಸಾಹ ತೋರಬೇಕು. ಇದರಿಂದ ಕ್ರಿಯಾಶೀಲರಾಗಿ ಅಭ್ಯಾಸದಲ್ಲಿ ತೊಡಗಬಹುದು ಎಂದು ಬೆಳವಡಿಯ ವೀರರಾಣಿ ಮಲ್ಲಮ್ಮ ಸ್ಮಾರಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎನ್​. ಸಿ. ಯರಗಂಬಳಿಮಠ ಹೇಳಿದರು.

ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಈಶಪ್ರಭು ಶಿಣ ಸಂಸ್ಥೆ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ, ಸಾಂಸತಿಕ ಚಟವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಎಂ.ಎಂ. ಕಾಡೇಶನವರ ಮಾತನಾಡಿ, ವಿದ್ಯಾರ್ಥಿಗಳು ನಾಳಿನ ನಾಗರಿಕ ಸಮಾಜದ ಪ್ರಜೆಗಳು. ಹಾಗಾಗಿ ಮಾದರಿ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು. ಪ್ರಾಚಾರ್ಯ ಎಂ.ಪಿ. ಉಪ್ಪಿನ ಅಧ್ಯತೆ ವಹಿಸಿ ಮಾತನಾಡಿದರು. ನಿವತ್ತ ಪ್ರಾಚಾರ್ಯ ಎಂ.ಜಿ. ಹಿರೇಮಠ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net