ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

11RAjesh5
Published on

ಚಾಮರಾಜನಗರ: ಚಾಮರಾಜನಗರ ವಿಶ್ವ ವಿದ್ಯಾನಿಲಯದ ವತಿಯಿಂದ 2024-25 ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ತಾಲೂಕಿನ ಹೊಂಡರಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಮಾರೋಪ ಸಮಾರಂಭವನ್ನು ಚಾಮರಾಜನಗರ ವಿಶ್ವ ವಿದ್ಯಾನಿಲಯದ ಆಡಳಿತ ಕುಲಸಚಿವ ಲೋಕನಾಥ್ ಹಾಗೂ ಮೌಲ್ಯಮಾಪನ ಕುಲಸಚಿವ ವೆಂಕಟರಮಣ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಆರ್. ಮಹೇಶ್ ಅವರು ವಿಶೇಷ ವಾರ್ಷಿಕ ಶಿಬಿರದ ವರದಿಯನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಹೊಂಡರಬಾಳು ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಕಲಾ, ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ತುಳಸಿ, ಗ್ರಾಮದ ಯಜಮಾನರಾದ ಶಿವಕುಮಾರ್, ಚಂದ್ರು, ಕಾಂತರಾಜು, ಮುಖಂಡರಾದ ರಮೇಶ್, ಎಐಬಿಎಸ್‌ಪಿ ಜಿಲ್ಲಾ ಅಧ್ಯಕ್ಷರಾದ ರಾಜೇಂದ್ರ, ಅಂಬೇಡ್ಕರ್ ಸಂಘದ ಅಧ್ಯಕ್ಷರಾದ ಕೃಷ್ಣಸ್ವಾಮಿ, ಸಿದ್ದರಾಜೇಗೌಡ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳ, ಮಹದೇವಸ್ವಾಮಿ, ರೈತ ಮುಖಂಡರಾದ ಶಿವನಂಜಯ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net