

ಮಂಗಳೂರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಇಲ್ಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಇಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಇಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರ್ನಾಟಕ ಸರ್ಕಾರವು ಸ್ಥಾಪಿಸಿದ ಈ ಪ್ರಶಸ್ತಿಯು ಇಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರತ ರತ್ನ ಸಿ.ಎನ್.ಆರ್.ರಾವ್ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಇತ್ತೀಚೆಗೆ ಬೆಂಗಳೂರಿನ ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ರೂಪ್ ಕೌರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.