ಎನ್​ಪಿಎಸ್ ಯೋಜನೆ ರದ್ದುಗೊಳಿಸಿ

2KDR2 web
Published on

ಕಡೂರು: ರಾಜ್ಯ ಸರ್ಕಾರ ಎನ್​ಪಿಎಸ್ ಯೋಜನೆ ರದ್ದುಪಡಿಸಿ ಒಪಿಎಸ್ ಪಿಂಚಣಿ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಪಟ್ಟಣದ ಎನ್​ಪಿಎಸ್ ನೌಕರರ ಬಳಗದಿಂದ ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಇಲಾಖೆಗಳ ಎನ್​ಪಿಎಸ್ ನೌಕರರು, ನೌಕರರ ಸಂಘ, ಶಿಕ್ಷಕರ ಸಂಘದ ಪದಾಧಿಕಾರಿಗಳು ಗಣಪತಿ ಪೆಂಡಾಲ್ ಆವರಣದಿಂದ ಶಾಸಕ ಬೆಳ್ಳಿಪ್ರಕಾಶ್ ಅವರ ಕಚೇರಿವರೆಗೆ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಶಾಸಕ ಬೆಳ್ಳಿಪ್ರಕಾಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬೆಳಗಾವಿ ಅಧಿವೇಶನದಲ್ಲಿ ಎನ್​ಪಿಎಸ್ ಯೋಜನೆ ರದ್ದುಗೊಳಿಸುವ ಬಗ್ಗೆ ನೌಕರರ ಪರವಾಗಿ ಧ್ವನಿ ಎತ್ತಬೇಕಿದೆ ಎಂದು ಮನವಿ ನೀಡಿದರು.

ಮನವಿ ಸ್ವೀಕರಿಸಿದ ಶಾಸಕ ಬೆಳ್ಳಿಪ್ರಕಾಶ್ ಮಾತನಾಡಿ, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು ಹಳೆಯ ಪಿಂಚಣಿ ಯೋಜನೆ ಉಳಿಸಬೇಕೆಂಬ ಬೇಡಿಕೆಗೆ ನನ್ನ ಸಹಮತವಿದೆ. ಹೊಸ ಯೋಜನೆಯಿಂದ ನೌಕರರಿಗೆ ಬಹಳಷ್ಟು ತೊಂದರೆಯಾಗುತ್ತಿರುವುದನ್ನು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net