ಎನ್‌ಪಿಎಸ್ ರದ್ದತಿ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ: ಎನ್‌ಪಿಎಸ್ ನೌಕರರ ಸಂಘ ಆಗ್ರಹ

BDVT WWWWWWWWEB
Published on

ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದು ಪಡಿಸುವ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ತಾಲೂಕು ಘಟಕ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮನವಿ ಸಲ್ಲಿಸಿತು. ತಾಪಂ ಆವರಣದಲ್ಲಿ ಜಾಗೃತಿ ಜಾಥಾ ನಡೆಸಿದ ಎನ್‌ಪಿಎಸ್ ಯೋಜನೆಯ ವ್ಯಾಪ್ತಿಗೆ ಬರುವ ರಾಜ್ಯ ಸರ್ಕಾರಿ ನೌಕರರು, ರಾಜ್ಯ ಸರ್ಕಾರ ಏಪ್ರಿಲ್ 2006ರಿಂದ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ 2006ಕ್ಕಿಂತ ಹಿಂದಿನ ನಿಶ್ಚಿತ ಠೇವಣಿ ಯೋಜನೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ನಮ್ಮ ಸಂಘದಿಂದ ಡಿ.19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾಡು ಇಲ್ಲವೆ ಮಡಿ ಎಂಬ ಶೀರ್ಷಿಕೆಯಡಿ ಅನಿರ್ದಿಷ್ಟಾವಧಿ ಹೋರಾಟವನ್ನು ಆಯೋಜಿಸಲಾಗಿದೆ. ಶಾಸಕರು ನಮ್ಮ ಹೋರಾಟವನ್ನು ಬೆಂಬಲಿಸಬೇಕು ಹಾಗೂ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸುವ ವಿಷಯವನ್ನು ಪ್ರಶ್ನಾವಳಿಯಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net