ಎನ್‌ಪಿಎಸ್‌ ರದ್ದುಗೊಳಿಸಿ ಒಪಿಎಸ್‌ ಜಾರಿಗೊಳಿಸಿ

AVP
Published on

ಚಿತ್ರದುರ್ಗ: ಶಿಕ್ಷಕರ ನಿವೃತ್ತಿಯ ನಂತರ ಬದುಕಿನ ಭದ್ರತೆಗಾಗಿ ಎನ್‌ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿಗೊಳಿಸಬೇಕು ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಮಾತನಾಡಿ, ಎಂಎಲ್ಸಿ ಚುನಾವಣೆಯಲ್ಲಿ ಶಿಕ್ಷಕರು ಕೊಟ್ಟ ಮಾತಿನಂತೆ ನಡೆದಿದ್ದಾರೆ. ಅದೇ ರೀತಿ ಸರ್ಕಾರ ನೀಡಿರುವ ಭರವಸೆ ಈಡೇರಿಸಬೇಕು. ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಸಂಜೀವಿನಿ ಯೋಜನೆ ಸರ್ಕಾರಿ ನೌಕರರಂತೆ ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ವಿಸ್ತರಿಸಬೇಕು. ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಿಂಚಣಿ ವಂಚಿತ ಶಾಲಾ-ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಪದವಿ ಕಾಲೇಜುಗಳ ಪ್ರಾಧ್ಯಾಪಕರ ಸಂಘದ ಪ್ರೊ.ಎಲ್.ನಾಗರಾಜ್, ಉಪನ್ಯಾಸಕರ ಸಂಘದ ಅಧ್ಯಕ್ಷ ಮಲ್ಲೇಶ್, ಕರ್ನಾಟಕ ದಲಿತ ಸಾಹಿತ್ಯ ಪರಿಷತ್ ಸಂಚಾಲಕ ಕೆರೆಯಾಗಳಹಳ್ಳಿ ತಿಪ್ಪೇಸ್ವಾಮಿ, ನಿವೃತ್ತ ಉಪನಿರ್ದೇಶಕ ಶಿವಕುಮಾರ್, ಉಪನ್ಯಾಸಕರಾದ ಡಿ.ವೀರಣ್ಣ, ಎ.ನಾಗರಾಜ್, ಪೆನ್ನಯ್ಯ, ಶಿವಕುಮಾರ್, ಎ.ಬಸವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net