ಎನ್‌ಪಿಟಿಇಎಲ್ ಅನುವಾದಕರಾಗಿ ಎಚ್.ಕೆ. ಶರತ್ ಆಯ್ಕೆ

27_HSN_04 (Sharath h k)
Published on

ಹಾಸನ: ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಎಚ್.ಕೆ. ಶರತ್ ಅವರು, ಎನ್‌ಪಿಟಿಇಎಲ್ (ತಂತ್ರಜ್ಞಾನ ಆಧಾರಿತ ಕಲಿಕೆಯ ರಾಷ್ಟ್ರೀಯ ಕಾರ್ಯಕ್ರಮ) ಅನುವಾದಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳ ಕಲಿಕಾ ಸಂಪನ್ಮೂಲಗಳನ್ನು ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸುವ ಯೋಜನೆಯನ್ನು ಶಿಕ್ಷಣ ಸಚಿವಾಲಯ ಕೈಗೆತ್ತಿಕೊಂಡಿದೆ. ಇದರ ಭಾಗವಾಗಿ ಎಚ್.ಕೆ. ಶರತ್ ಅವರು ಕೃತಕ ಬುದ್ಧಿಮತ್ತೆ ಬಳಸಿ ಕನ್ನಡಕ್ಕೆ ಅನುವಾದಿಸಲ್ಪಡುವ ಕಲಿಕಾ ಸಂಪನ್ಮೂಲಗಳ ಗುಣಮಟ್ಟ ಪರಿಶೀಲಿಸುವ ಕೆಲಸ ನಿರ್ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net