ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ಗೆ ಸ್ವಾಗತ

NCP
Published on

ಬೆಳಗಾವಿ(ಬೋರಗಾಂವ): ಶನಿವಾರ ನಡೆದ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಆಗಮಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಹಾಗೂ ಎನ್‌ಸಿಪಿ ಮುಖಂಡ ಪಿ.ಜಿ.ಆರ್‌.ಸಿಂಧ್ಯಾ, ನಿಪ್ಪಾಣಿ ಯುವ ಮುಖಂಡ ಉತ್ತಮ ಪಾಟೀಲ ಅವರು ಬರಮಾಡಿಕೊಂಡರು. ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ ನಡೆದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ ಶರದ್‌ ಪವಾರ್‌ ಅವರು ಇಡೀ ಕಾರ್ಯಕ್ರಮ ಮುಗಿಯುವವರೆಗೂ ವೇದಿಕೆ ಮೇಲೆ ಆಸೀನರಾಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಬಳಿಕ ೨ನೇ ಬಾರಿಗೆ ಪವಾರ್‌ ಅವರು, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ವಿವಿಧ ರಾಜ್ಯಗಳ ಹಿರಿಯ ಮುಖಂಡರ ಜತೆ ಚರ್ಚೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net