ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ

25hnr2
Published on

ಹೊನ್ನಾವರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಡಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಮುಖರು ತಹಸೀಲ್ದಾರ್ ವಿವೇಕ ಶೇಣ್ವಿ ಅವರ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರೊನಾದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದೇ ರೈತ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗುತ್ತಿವೆ. ಕಾರ್ಪೇರೇಟ್ ಕಂಪನಿಗಳ ಪರವಾಗಿರುವ ಮಸೂದೆಯನ್ನು ಪ್ರತಿಪಕ್ಷ ಸೇರಿ ಯಾರ ವಿಶ್ವಾಸಕ್ಕೂ ತೆಗೆದುಕೊಳ್ಳದೆ, ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಸರ್ಕಾರ ಹಿಂದೆ ಸರಿಯಬೇಕು. ವಿದ್ಯುತ್​ಶಕ್ತಿ ತಿದ್ದುಪಡಿ ವಿಧೇಯಕ ಕಾಯ್ದೆ 2020, ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ರೈತ ಸಂಘದ ಅಧ್ಯಕ್ಷ ತಿಮ್ಮಪ್ಪ ಗೌಡ, ಕಾರ್ಯದರ್ಶಿ ಗಣೇಶ ಭಂಡಾರಿ, ಅಣ್ಣಪ್ಪ ಗೌಡ, ಕಮಲಾ ಹೆಗಡೆ, ಕಲ್ಯಾಣಿ ಗೌಡ, ಮಂಜುನಾಥ ಗೌಡ ಇತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net