ಎಪಿಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

ಎಪಿಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
Published on

ಹಾಸನ: ಕರಾಟೆ ಕ್ರೀಡೆ ಅಭ್ಯಾಸ ಮಾಡುವವರು ಎಲ್ಲಾ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದರೆ ಉತ್ತಮ ಸಾಧನೆ ಸಾಧ್ಯ ಎಂದು ಎಪಿಜೆ ಕಾಲೇಜಿನ ಕಾರ್ಯದರ್ಶಿ ಡಿ.ಮುರುಳಿ ಹೇಳಿದರು
ನಗರದ ನಗರದ ಅರಸೀಕೆರೆ ರಸ್ತೆ ಬಿ.ಕಾಟೀಹಳ್ಳಿಯ ಎಪಿಜೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ, ಕಾಲೇಜು ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆಯಿಂದ ಆರೋಗ್ಯ ಮತ್ತು ದೈಹಿಕವಾಗಿ ಸದೃಢರಾಗುತ್ತಾರೆ ಎಂದು ಹೇಳಿದರು
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ತಾವು ಕಲಿತಿರುವ ಕರಾಟೆಯ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು.ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಹದೇವ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಆರ್.ಪಾಲಾಕ್ಷ ,ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ಹರೀಶ್, ಎಪಿಜೆ ಸಂಸ್ಥೆಯ ಅಧ್ಯಕ್ಷ ಎಚ್.ಕೆ. ದೀಪಕ್,ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net