

ಕಲಬುರಗಿ: ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ನಮ್ಮ ಮೇಲೆ ಹಲ್ಲೆ ಮಾಡಿರುವ ರಾಜಶೇಖರ, ಯಶವಂತರಾಯ ಅವರ ವಿರುದ್ಧ ಪ್ರಕರಣ ದಾಖಲಿಸಲು ನೆಲ್ಲೋಗಿ ಪೊಲೀಸರು ನಿರಾಕರಿಸಿದ್ದಾರೆ. ಕೂಡಲೇ ಅವರ ವಿರುದ್ಧ ದೂರು ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಮಂದೇವಾಲ ಗ್ರಾಮದ ಶಂಕರ ಎಸ್.ಆಗ್ರಹಿಸಿದರು. ಹಣಕಾಸಿನ ವಿಷಯಕ್ಕೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೊಂಟದ ಭಾಗದಲ್ಲಿ ಎಲುಬಿಗೆ ಸಮಸ್ಯೆ ಆಗಿದೆ. ಆಸ್ಪತ್ರೆ ವೈದ್ಯರೂ ಮೂರು ತಿಂಗಳು ಕೆಲಸ ಮಾಡುವಂತಿಲ್ಲ ಎಂದು ವರದಿ ನೀಡಿದ್ದಾರೆ. ಇಷ್ಟಾದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ. ಕರವೇ ಹೆಸರು ಹೇಳಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕುರುಡು ಪತ್ನಿ, ಮಗ, ತಾಯಿಯೊಂದಿಗೆ ವಾಸಿಸುತ್ತಿz್ದೆÃನೆ. ಯಾವುದೇ ಸಮಯದಲ್ಲಿ ಅವರು ನಮ್ಮ ಕುಟುಂಬದ ಮೇಲೆ ದಾಳಿ ಮಾಡಬಹುದು. ಆದ್ದರಿಂದ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆ ಎದುರು ಆತ್ಮಹತ್ಯೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.