ಎಬಿವಿಪಿ ಕಾರ್ಯಕರ್ತರಿಂದ ಕೆಎಸ್ಸಾರ್ಟಿಸಿ ಡಿಸಿಗೆ ಮನವಿ ದರ ಏರಿಕೆಗೆ ಖಂಡನೆ

CTD ABVP--------------
Published on

ಚಿತ್ರದುರ್ಗ: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಹಾಗೂ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಡಿಸಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಿತ್ಯ ಸಾವಿರಾರು ಜನ ಸಂಚಾರಕ್ಕೆ ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಆದರೆ, ಸರ್ಕಾರ ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿ ಬಡವರು, ಮಧ್ಯಮವರ್ಗದವರ ಮೇಲೆ ಹೊರೆ ಹೇರಿದೆ ಎಂದು ದೂರಿದರು.

ಶಕ್ತಿ ಯೋಜನೆಯಿಂದಾಗಿ ನಿತ್ಯ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿದೆ. ಸರ್ಕಾರ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡದ ಕಾರಣ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಆಗುತ್ತಿಲ್ಲ ಎಂದು ತಿಳಿಸಿದರು.

ಸರ್ಕಾರ ಕೂಡಲೇ ಬಸ್‌ಗಳನ್ನು ಹೆಚ್ಚಿಸಿ ವಿದ್ಯಾರ್ಥಿಗಳು ಹಾಗೂ ಜನರ ಪ್ರಯಾಣಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ವಿಭಾಗ ಸಹ ಸಂಚಾಲಕ ಗೋಪಿ, ನಗರ ಕಾರ್ಯದರ್ಶಿ ರಾಜು ಹೊನ್ನಮರಡಿ, ನಗರ ಸಹ ಕಾರ್ಯದರ್ಶಿ ಸಂಜಯ್, ತಿಪ್ಪೇಶ್, ಪ್ರೀತಮ್, ಸುದರ್ಶನ್, ಜೀವನ್, ಚರಣ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net