ಎರಡನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

28 HANUR 1
Published on

ಹನೂರು: ಏತ ನೀರಾವರಿ ಯೋಜನೆಯನ್ನು ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ವಡಕೆಹಳ್ಳದಲ್ಲಿ ಆರಂಭಿಸಿರುವ ಆಹೋ ರಾತ್ರಿ ಧರಣಿ 2ನೇ ದಿನವಾದ ಮಂಗಳವಾರವೂ ಮುಂದುವರಿಯಿತು.

ರೈತ ಸಂಘ ಹಾಗೂ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ಕೈಗೊಂಡಿರುವ ಈ ಧರಣಿಯಲ್ಲಿ ನೂರಾರು ರೈತರು ಭಾಗಿಯಾಗಿದ್ದು, ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆಯನ್ನು ರೂಪಿಸಿ ಕುರಟ್ಟಿ, ಹೊಸೂರು, ಶೆಟ್ಟಳ್ಳಿ ಹಾಗೂ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೆರೆಗಳಿಗೂ ನೀರು ತುಂಬಿಸಬೇಕು. ಹಳ್ಳಕೊಳ್ಳಗಳಿಗೂ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ದಂಟಳ್ಳಿ ಹಾಗೂ ಇತರ ಗ್ರಾಮಗಳಲ್ಲಿ ನನೆಗುದಿಗೆ ಬಿದ್ದಿರುವ ಬಗರ್‌ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಬೇಕು.

ಪೋಡಿಮುಕ್ತ ಗ್ರಾಮವಾಗಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆ. ಧರಣಿ ಸ್ಥಳಕ್ಕೆ ಸೋಮವಾರ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಅಗತ್ಯ ಭರವಸೆ ನೀಡಿದರೂ ರೈತರು ನೀರಾವರಿ ಯೋಜನೆಗೆ ಡಿಪಿಆರ್ ಆಗುವವರೆಗೂ ಆಹೋ ರಾತ್ರಿ ಧರಣಿ ನಡೆಸುವುದಾಗಿ ತಿಳಿಸಿದ್ದು, ಧರಣಿಯನ್ನು ಮುಂದುವರಿಸಿದ್ದಾರೆ.

ಮಂಗಳವಾರ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಧರಣಿಯಲ್ಲಿ ಭಾಗಿಯಾಗಿ ಬೆಂಬಲ ನೀಡಿದರು. ಈ ವೇಳೆ ಅವರು ಮಾತನಾಡಿ, ಈ ಭಾಗದಲ್ಲಿ ಕಾವೇರಿ ನದಿ ಹರಿಯುತ್ತಿದ್ದರೂ ಏತ ನೀರಾವರಿ ಯೋಜನೆಯನ್ನು ರೂಪಿಸದಿರುವುದು ವಿಪರ್ಯಾಸ. ಇದರಿಂದ ರೈತರು ಹಾಗೂ ಜನರು ನೀರಿಗಾಗಿ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ರೈತ ಸಂಘಟನೆ ವತಿಯಿಂದ ಹಮ್ಮಿಕೊಂಡಿರುವ ಧರಣಿ ಸಮಸ್ಯೆ ಬಗೆಹರಿಯುವವರಿಗೂ ಮುಂದುವರಿಯುವುದು ಎಂದು ತಿಳಿಸಿದರು. ಇದೇ ವೇಳೆ ರೈತರು ಧರಣಿ ನಿರತ ಸ್ಥಳಕ್ಕೆ ಅಕಾರಿಗಳು ಆಗಮಿಸದಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮಾರ್ಟಳ್ಳಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ರೈತ ಮುಖಂಡರಾದ ಲೂರ್ದುಸ್ವಾಮಿ, ಜೋಸ್ೆ, ಪೀಟರ್, ಜಾನ್ ಜೋಸ್ೆ, ಪುಟ್ಟಸ್ವಾಮಿ, ರಾಜು, ಶಾಂತಕುಮಾರ್, ಸಗಾಯಮೇರಿ, ಕುಮಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net